ವಾಶಿಂಗ್ಟನ್ : ಡೊನಾಲ್ಡ್ ಟ್ರಂಪ್ ಅಮೆರಿಕದ 47 ನೇ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಸಾಂಪ್ರದಾಯಿಕವಾಗಿ ಕ್ಯಾಪಿಟಲ್‌ನ ರಮಣೀಯ ವೆಸ್ಟ್ ಲಾನ್‌ನಲ್ಲಿರುವ ಬೃಹತ್ ತಾತ್ಕಾಲಿಕ ವೇದಿಕೆಯಲ್ಲಿ ನಡೆಯುತ್ತಿದ್ದ ನೂತನ ಅಧ್ಯಕ್ಷರ ಪ್ರಮಾಣ ವಚನ ಸ್ವೀಕಾರ ಸಮಾರಂಭವನ್ನು ಶೀತ ಮುನ್ಸೂಚನೆಯಿಂದಾಗಿ ಒಳಾಂಗಣಕ್ಕೆ ಸ್ಥಳಾಂತರಿಸಲಾಗಿದೆ.
ನೂತನ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಕೂಡ ಪ್ರಮಾಣ ವಚನ ಸ್ವೀಕರಿಸಿದರು. ಡೊನಾಲ್ಡ್ ಟ್ರಂಪ್ ಅವರು ಅಧ್ಯಕ್ಷರಾದ ಬಳಿಕ 100 ಆದೇಶಗಳಿಗೆ ಸಹಿ ಮಾಡುವ ನಿರೀಕ್ಷೆಯಿದೆ.