ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಶೈಕ್ಷಣಿಕ ವರ್ಷಕ್ಕೆ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ವಿದೇಶಿ ವಿಶ್ವವಿದ್ಯಾನಿಲಯಗಳಲ್ಲಿ ಸ್ನಾತಕೊತ್ತರ ಕೋರ್ಸ್ಗಳಲ್ಲಿ ವ್ಯಾಸಂಗ (National overseas scholarship), IIT, IIIT,NIT, IIM, IISER, AIIMS, NLU, INI & IUSLA ಇತ್ಯಾದಿ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಹಾಗೂ ಅಂಗಿಕೃತವಾದ ವಿಶ್ವವಿದ್ಯಾನಿಲಯಗಳಲ್ಲಿ ಪೂರ್ಣಕಾಲಿಕವಾಗಿ ಪಿ.ಎಚ್.ಡಿ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಫೆಲೋಶಿಪ್‌ಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ನವೆಂಬರ್ 30 ರ ವರೆಗೆ ವಿಸ್ತರಿಸಲಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.