ಇಂಡೋನೇಷ್ಯಾ: ಜ್ವಾಲಾಮುಖಿ ಸ್ಪೋಟದಿಂದ ಭಾರಿ ಪ್ರವಾಹ, ಮನೆಗಳು ಜಲಾವೃತ, ಮೃತರ ಸಂಖ್ಯೆ 50ಕ್ಕೆ ಏರಿಕೆ.

ಇಂಡೋನೇಷ್ಯಾ: ಪಶ್ಚಿಮ ಇಂಡೋನೇಷ್ಯಾದಲ್ಲಿ ಸಂಭವಿಸಿದ ಜ್ವಾಲಾಮುಖಿ ಸ್ಪೋಟದಿಂದ ಉಂಟಾದ ಹಠಾತ್ ಪ್ರವಾಹ ಮತ್ತು ಶೀತ ಲಾವಾ ಹರಿವಿನಿಂದ ಮೃತಪಟ್ಟವರ ಸಂಖ್ಯೆ 50ಕ್ಕೆ ಏರಿದೆ. 27 ಮಂದಿ ನಾಪತ್ತೆಯಾಗಿದ್ದಾರೆ ಎಂದು ಸ್ಥಳೀಯ ವಿಪತ್ತು ನಿರ್ವಹಣಾ ಸಂಸ್ಥೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಶನಿವಾರ ಸಂಜೆ ಸುಮಾತ್ರಾ ದ್ವೀಪದಲ್ಲಿ ಜ್ವಾಲಾಮುಖಿ ಸ್ಪೋಟಗೊಂಡಿದೆ. ಬಳಿಕ ಸಂಭವಿಸಿದ ಪ್ರವಾಹದಿಂದ ರಸ್ತೆಗಳು, ಮನೆಗಳು ಜಲಾವೃತಗೊಂಡಿವೆ.
ಭಾನುವಾರ 37 ಮಂದಿ ಸಾವಿಗೀಡಾಗಿದ್ದರು. ಇಂದು ಅವಶೇಷಗಳ ಅಡಿಯಿಂದ 50 ಶವಗಳನ್ನು ಹೊರತೆಗೆಯಲಾಗಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದೆ ಎಂದು ಪಶ್ಚಿಮ ಸುಮಾತ್ರಾ ವಿಪತ್ತು ನಿರ್ವಹಣಾ ಸಂಸ್ಥೆ ಅಧಿಕಾರಿ ಇಲ್ಹಾಮ್ ವಹಾಬ್ ತಿಳಿಸಿದ್ದಾರೆ.