ಇಂದು ಕರಾವಳಿ ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ.

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರ ಶುರುವಾಗಿದೆ. ಶುಕ್ರವಾರ ಬೆಳಿಗ್ಗೆಯಿಂದಲೇ ರಾಜ್ಯದ ಮಲೆನಾಡು, ಕರಾವಳಿ ಸೇರಿ ರಾಜಧಾನಿ ಬೆಂಗಳೂರಿನಲ್ಲಿ ಭಾರೀ ಮಳೆಯಾಗಿದೆ.

ಇಂದು ಬೆಳಗಾವಿ, ಕಲಬುರಗಿ, ವಿಜಯಪುರ, ಯಾದಗಿರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮೈಸೂರು, ರಾಮನಗರ, ತುಮಕೂರು ಸೇರಿದಂತೆ ಹಲವೆಡೆ ಭಾರಿ ಮಳೆಯಾಗುವ ನಿರೀಕ್ಷೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.