ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ನಿಧನ; ಇರಾನ್ ಹಂಗಾಮಿ ಅಧ್ಯಕ್ಷರಾಗಿ ಮೊಹಮ್ಮದ್ ಮುಖ್ಬಾರ್ ನೇಮಕ

ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಹೆಲಿಕಾಪ್ಟರ್ ಅಪಘಾತದಲ್ಲಿ ನಿಧನ ಹೊಂದಿರುವ ಹಿನ್ನಲೆಯಲ್ಲಿ ಇರಾನ್ ನ ಮೊದಲ ಉಪಾಧ್ಯಕ್ಷ ಮೊಹಮ್ಮದ್ ಮುಖ್ಬಾರ್ ಅವರನ್ನು ದೇಶದ ಹಂಗಾಮಿ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಇರಾನ್ ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಸೋಮವಾರ ಈ ಘೋಷಣೆ ಮಾಡಿದ್ದಾರೆ.

ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ, ವಿದೇಶಾಂಗ ಸಚಿವ ಹುಸೇನ್ ಅಮಿರ್ ಬೊಲ್ಲಾಹಿಯಾನ್, ಪೂರ್ವ ಅರ್ಬೈಜಾನ್ ಪ್ರಾಂತ್ಯದ ಗವರ್ನರ್ ಮತ್ತು ಇತರ ಅಧಿಕಾರಿಗಳು ಮತ್ತು ಅಂಗರಕ್ಷಕರನ್ನು ಹೊತ್ತ ಹೆಲಿಕಾಪ್ಟರ್ ಭಾನುವಾರ ದೇಶದ ವಾಯುವ್ಯದ ಪರ್ವತ ಪ್ರದೇಶದಲ್ಲಿ ಅಪಘಾತಕ್ಕೀಡಾಗಿತ್ತು.

ಇಬ್ರಾಹಿಂ ರೈಸಿ ಅವರ ನಿಧನಕ್ಕೆ ಸಂತಾಪ ಸಂದೇಶದಲ್ಲಿ ಖಮೇನಿ ಅವರು ಉಪರಾಷ್ಟ್ರಪತಿಗಳು ಮಧ್ಯಂತರ ಕರ್ತವ್ಯಗಳನ್ನು ವಹಿಸಿಕೊಳ್ಳಲಿದ್ದಾರೆ ಎಂದು ಘೋಷಿಸಿದರು.