ಈ ವರ್ಷ ಮೈ ಸುಡಲಿದೆ ವಿಪರೀತ ಬಿಸಿಲು: ಏಪ್ರಿಲ್,ಮೇ ನಲ್ಲೂ ಮುಂಗಾರು ಪೂರ್ವ ಮಳೆ

ಬೆಂಗಳೂರು: ರಾಜ್ಯಾದ್ಯಂತ ರಣಬೀಸಿಲು ಜಾಸ್ತಿಯಾಗುತ್ತಿದೆ. ಕಳೆದ ವರ್ಷವೇ ದಾಖಲೆಯ ರಣಬಿಸಿಲು ದಾಖಲಾಗಿತ್ತು. ಸುಡು ಬಿಸಿಲಿಗೆ ಜನರು ಕಂಗೆಟ್ಟು ಹೋಗಿದ್ದರು. ಇದೀಗ ವರ್ಷವೂ ಕಳೆದ ವರ್ಷಕ್ಕಿಂತ ಹೆಚ್ಚು ಬಿಸಿಲಿರುತ್ತದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ಈ ವರ್ಷ ಫೆಬ್ರವರಿಯಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಶಿಯಸ್‌ ಬಿಸಿಲು ಅಧಿಕವಾಗಿದೆ. ಇದು ಹೀಗೆ ಮುಂದುವರೆದು ಮಾರ್ಚ್ ನಲ್ಲಿ ತಾಪಮಾನ ದಾಖಲೆ ಮಟ್ಟಕ್ಕೆ ಮುಟ್ಟಲಿದೆಯಂತೆ. ಇನ್ನು ಬಿಸಿಲಿನ ಜೊತೆ ಪೂರ್ವ ಮುಂಗಾರು ಋತುವಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.