ಉಡುಪಿ:ಏ.07 ರಂದು ವಿಶ್ವ ಆರೋಗ್ಯ ದಿನಾಚರಣೆ ಮತ್ತು ಮಾಹಿತಿ ಕಾರ್ಯಕ್ರಮ

ಉಡುಪಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಸರ್ವೇಕ್ಷಣಾ ಘಟಕ ಎನ್.ಸಿ.ಡಿ ಘಟಕ, ಜಿಲ್ಲಾ ಆಸ್ಪತ್ರೆ ಎನ್.ಸಿ.ಡಿ ವಿಭಾಗ, ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ,
ಕ್ರಿಶ್ಚಿಯನ್ ಇಂಗ್ಲೀಷ್ ಮೀಡಿಯಂ ಸ್ಕೂಲ್ ಮಿಷನ್ ಆಸ್ಪತ್ರೆ ರೋಡ್ ಉಡುಪಿ ಹಾಗೂ ಎ.ಜೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಮಂಗಳೂರು ಇವರ ಸಹಯೋಗದಲ್ಲಿ ಏಪ್ರಿಲ್ 7 ರಂದು ಬೆಳಗ್ಗೆ 10 ಗಂಟೆಗೆ ನಗರದ ಮಿಷನ್ ಆಸ್ಪತ್ರೆ ರೋಡ್‌ನ ಕ್ರಿಶ್ಚಿಯನ್ ಇಂಗ್ಲೀಷ್ ಮೀಡಿಯಂ ಸ್ಕೂಲ್‌ನಲ್ಲಿ ವಿಶ್ವ ಆರೋಗ್ಯ ದಿನಾಚರಣೆ ಮತ್ತು ಮಾಹಿತಿ ಕಾರ್ಯಕ್ರಮದ ಬಗ್ಗೆ ಸಾರ್ವಜನಿಕ ಅರಿವು ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಶಸ್ತ್ರ ಚಿಕಿತ್ಸಕರ ಕಚೇರಿ ಪ್ರಕಟಣೆ ತಿಳಿಸಿದೆ.