ಉಡುಪಿ:ಕರ್ನಾಟಕ ಕ್ರೀಡಾಕೂಟ ಸಮಾರೋಪ : ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಕಾರ್ಯಕ್ರಮ ಯಶಸ್ವಿಗೊಳಿಸಿ-ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಒಲಿಂಪಿಕ್ ಸಂಸ್ಥೆ ಹಾಗೂ ಜಿಲ್ಲಾಡಳಿತ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಕರ್ನಾಟಕ ಕ್ರೀಡಾಕೂಟ-2025 ರ ಸಮಾರೋಪ ಸಮಾರಂಭವು ಜನವರಿ 23 ರಂದು ಸಂಜೆ 5 ಗಂಟೆಗೆ ನಗರದ ಅಜ್ಜರಕಾಡು ಮಹಾತ್ಮಾಗಾಂಧಿ ಜಿಲ್ಲಾ
ಕ್ರೀಡಾಂಗಣದಲ್ಲಿ ನಡೆಯಲಿದೆ.

ಸದರಿ ಸಮಾರಂಭದಲ್ಲಿ ಕರ್ನಾಟಕ ಸರ್ಕಾರದ ಘನವೆತ್ತ ರಾಜ್ಯಪಾಲರಾದ ಗೌರವಾನ್ವಿತ ಥಾವರ್ ಚಂದ್ ಗೆಹೋಟ್, ರಾಜ್ಯದ ಗೃಹ ಸಚಿವರಾದ ಡಾ.ಜಿ ಪರಮೇಶ್ವರ ಹಾಗೂ ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ. ಸಭಾ ಕಾರ್ಯಕ್ರಮದ ನಂತರ ಆಳ್ವಾಸ್ ಮೂಡಬಿದಿರೆ ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಸಾರ್ವಜನಿಕರು ಹೆಚ್ಚಿನ
ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.