ಉಡುಪಿ:ಕರ್ನಾಟಕ ಕ್ರೀಡಾಕೂಟ – ಸಮಾರೋಪ ಸಮಾರಂಭ

udupixpress

ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಒಲಿಂಪಿಕ್ ಸಂಸ್ಥೆ ಹಾಗೂ ಜಿಲ್ಲಾಡಳಿತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ಕ್ರೀಡಾಕೂಟ-2025 ರ ಸಮಾರೋಪ ಸಮಾರಂಭ ಕಾರ್ಯಕ್ರಮವು ಜನವರಿ 23 ರಂದು ಸಂಜೆ 5 ಗಂಟೆಗೆ ನಗರದ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.

ಮುಖ್ಯ ಅತಿಥಿಗಳಾಗಿ ಕರ್ನಾಟಕ ಸರ್ಕಾರದ ಘನತೆವೆತ್ತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಭಾಗವಹಿಸಲಿದ್ದು, ಶಾಸಕ ಯಶ್‌ಪಾಲ್ ಎ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್, ಗೃಹ ಸಚಿವರಾದ ಡಾ. ಜಿ.ಪರಮೇಶ್ವರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳಕರ್, ಫೀಬಾ ಏಷ್ಯಾ ಮತ್ತು ಕರ್ನಾಟಕ ಒಲಂಪಿಕ್ ಸಂಸ್ಥೆಯ ಅಧ್ಯಕ್ಷ ಡಾ.ಕೆ ಗೋವಿಂದರಾಜ್, ಸಂಸದರಾದ ಬಿ.ವೈ ರಾಘವೇಂದ್ರ, ಕೋಟ ಶ್ರೀನಿವಾಸ ಪೂಜಾರಿ ಹಾಗೂ ಕ್ಯಾಪ್ಟನ್ ಬ್ರಿಜೇಶ್ ಚೌಟ, ರಾಜ್ಯಸಭೆ ಸಂಸದರಾದ ಡಿ.ವೀರೇಂದ್ರ ಹೆಗ್ಗಡೆ, ಶಾಸಕರುಗಳಾದ ವಿ ಸುನಿಲ್ ಕುಮಾರ್, ಹರೀಶ್ ಪೂಂಜಾ, ಉಮಾನಾಥ್ ಕೋಟ್ಯಾನ್, ಭಾಗೀರಥಿ ಮುರುಳ್ಯ, ಗುರುರಾಜ್ ಶೆಟ್ಟಿ ಗಂಟಿಹೊಳೆ, ಎ ಕಿರಣ್ ಕುಮಾರ್ ಕೊಡ್ಗಿ, ಗುರ್ಮೆ ಸುರೇಶ್ ಶೆಟ್ಟಿ, ಡಾ.ಭರತ್ ಶೆಟ್ಟಿ ವೈ, ರಾಜೇಶ್ ನಾಯ್ಕ್ ಯು ಹಾಗೂ ಅಶೋಕ್ ಕುಮಾರ್ ರೈ, ವಿಧಾನಪರಿಷತ್ ಶಾಸಕರುಗಳಾದ ಎಸ್.ಎಲ್. ಭೋಜೇಗೌಡ, ಕೆ.ಪ್ರತಾಪ್ ಸಿಂಹ ನಾಯಕ್, ಐವನ್ ಡಿ ಸೋಜಾ, ಮಂಜುನಾಥ್ ಭಂಡಾರಿ, ಡಾ. ಧನಂಜಯ ಸರ್ಜಿ ಹಾಗೂ ಕಿಶೋರ್ ಕುಮಾರ್ ಪುತ್ತೂರು, ಮಂಗಳೂರು ಮಹಾನಗರ ಪಾಲಿಕೆಯ ಮಹಾ ಪೌರ ಮನೋಜ್ ಕುಮಾರ್, ಉಡುಪಿ ನಗರಸಭಾ ಅಧ್ಯಕ್ಷ ಪ್ರಭಾಕರ ಪೂಜಾರಿ, ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತ ಡಿ.ಎಸ್ ಗಟ್ಟಿ, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷೆ ಮಾಲಾ ನಾರಾಯಣರಾವ್, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷೆ ಜೋಕಿಂಸ್ಟಾನ್ಲಿ ಅಲ್ವಾರಿಸ್, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ್ ಗಟ್ಟಿ ಕೆ, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಉಮರ್ ಯು.ಹೆಚ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸತ್ಯವತಿ ಜಿ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ.