ಉಡುಪಿ:ಕಾನೂನು ಪದವೀಧರರಿಗೆ ಪ್ರೋತ್ಸಾಹಧನ : ಅರ್ಜಿ ಆಹ್ವಾನ

ಉಡುಪಿ: ಕಾನೂನು ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ನವ ಕಾನೂನು ಪದವೀಧರರಿಗೆ ಮಾಹೆಯಾನ
2000 ರೂ. ನಂತೆ ಪೋತ್ಸಾಹಧನ ಮಂಜೂರು ಮಾಡಲು ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿನಡಿಯಲ್ಲಿ ವಕೀಲ ವೃತ್ತಿಗೆ
ನೋಂದಾಯಿಸಲ್ಪಟ್ಟ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಮಾರ್ಚ್ 9 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಪ್ರಧಾನ ಜಿಲ್ಲಾ ನ್ಯಾಯಾಧೀಶರ ಕಚೇರಿ, ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣ, ಉಡುಪಿ ಅನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ನ್ಯಾಯಾಲಯದ ಕಚೇರಿ ಪ್ರಕಟಣೆ ತಿಳಿಸಿದೆ.