ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಕ್ಷತ್ರೀಯ ಮರಾಠ
ಪರಿಷತ್ತು (ರಿ) ಹಾಗೂ ಛತ್ರಪತಿ ಶಿವಾಜಿ ವಿವಿದ್ದೋದೇಶ ಸಹಕಾರ ಸಂಘ(ರಿ) ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಛತ್ರಪತಿ ಶಿವಾಜಿ ಜಯಂತಿ ಆಚರಣೆಯು ಫೆಬ್ರವರಿ 19 ರಂದು ಬೆಳಗ್ಗೆ 10 ಗಂಟೆಗೆ ಮಲ್ಪೆಯ ಸರಕಾರಿ ಪದವಿ ಪೂರ್ವ ಕಾಲೇಜು ಸಭಾಭವನದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಉದ್ಘಾಟಿಸಲಿದ್ದು ಶಾಸಕ ಯಶ್‌ಪಾಲ್ ಎ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಶಿವರಾಜ ಎಸ್. ತಂಗಡಗಿ, ಸಂಸದರಾದ ಬಿ. ವೈ. ರಾಘವೇಂದ್ರ ಹಾಗೂ ಕೋಟ ಶ್ರೀನಿವಾಸ ಪೂಜಾರಿ, ಶಾಸಕರುಗಳಾದ ವಿ. ಸುನೀಲ್ ಕುಮಾರ್, ಗುರುರಾಜ್ ಶೆಟ್ಟಿ ಗಂಟಿಹೊಳೆ, ಎ. ಕಿರಣ್ ಕುಮಾರ್ ಕೊಡ್ಗಿ ಹಾಗೂ ಗುರ್ಮೆ ಸುರೇಶ್ ಶೆಟ್ಟಿ, ವಿಧಾನ ಪರಿಷತ್ ಶಾಸಕರುಗಳಾದ ಎಸ್.ಎಲ್.ಭೋಜೇಗೌಡ, ಮಂಜುನಾಥ್ ಭಂಡಾರಿ, ಡಾ. ಧನಂಜಯ ಸರ್ಜಿ ಹಾಗೂ ಕಿಶೋರ್ ಕುಮಾರ್ ಪುತ್ತೂರು, ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸತ್ಯವತಿ ಜಿ,
ಮಲ್ಪೆ ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ ಹಿರಿಯ ಸಹ ಶಿಕ್ಷಕ ಸತೀಶ್ ಭಟ್ ಹಾಗೂ ಮತ್ತಿತರು
ಭಾಗವಹಿಸಲಿದ್ದು, ಲೇಖಕ ಮಂಜುನಾಥ ಹಿಲಿಯಾಣ ಉಪನ್ಯಾಸ ನೀಡಲಿದ್ದಾರೆ.












