ಉಡುಪಿ: ದೀಪಾವಳಿ ಹಬ್ಬದ ಸಂದರ್ಭದಲ್ಲಿ (ಅಕ್ಟೋಬರ್ 30 ರಿಂದ ನವೆಂಬರ್ 2 ರ ವರೆಗೆ ಮಾತ್ರ)ಜಿಲ್ಲಾ ವ್ಯಾಪ್ತಿಯಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟ ಮಾಡಲು ಅಪೇಕ್ಷಿಸುವವರಿಂದ ಸುಡುಮದ್ದು ಮಾರಾಟದ ಪರವಾನಿಗೆ
ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿದಾರರು ಐಇ-5 ರಲ್ಲಿ ತಾತ್ಕಾಲಿಕ ಸುಡುಮದ್ದು ಪರವಾನಿಗೆಯನ್ನು ಪಡೆಯಲು ಮುಂಚಿತವಾಗಿ ಇ-5 ನಮೂನೆಯನ್ನು ಜಿಲ್ಲಾಧಿಕಾರಿಗಳ ಕಚೇರಿಯಿಂದ ಪಡೆದು, ತಾಲೂಕು ಮಟ್ಟದಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟ ಮಾಡುವ ಪರವಾನಿಗೆ ನೀಡಲು ತಹಶೀಲ್ದಾರರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿದ್ದು, ಸದ್ರಿ ಸಮಿತಿಗೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿ ನಿರಾಕ್ಷೇಪಣಾ
ಪತ್ರವನ್ನು ಪಡೆದು ಜಿಲ್ಲಾಧಿಕಾರಿಗಳ ಕಚೇರಿಗೆ ಸಲ್ಲಿಸಿದಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟ ಪರವಾನಿಗೆಯನ್ನು ನೀಡುವ ಬಗ್ಗೆ, ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು.
ಸ್ಫೋಟಕ ಕಾಯಿದೆ ಮತ್ತು ನಿಯಮ 2008 ರ ಶೆಡ್ಯೂಲ್-Iಗಿ ರ ಅಡಿಯಲ್ಲಿ ಜಿಲ್ಲಾ ವ್ಯಾಪ್ತಿಯ ಈಗಾಗಲೇ ಸಮಿತಿಯು ನಿಗದಿಪಡಿಸಿರುವ
ತೆರೆದ ಪ್ರದೇಶಗಳಲ್ಲಿ ದೀಪಾವಳಿ ಹಬ್ಬದ ನಿಮಿತ್ತ ಸುಡುಮದ್ದು ಮಾರಾಟದ ತಾತ್ಕಾಲಿಕ ಪರವಾನಿಗೆ ನೀಡುವ ಬಗ್ಗೆ, ಅರ್ಜಿಗಳನ್ನು ಸೆಪ್ಟಂಬರ್ 20 ರಿಂದ ಜಿಲ್ಲಾಧಿಕಾರಿಯವರ ಕಚೇರಿಯಿಂದ ಪಡೆಯಬಹುದಾಗಿದೆ.
ಅರ್ಜಿ ಪಡೆಯಲು ಅಕ್ಟೋಬರ್ 15 ಕೊನೆಯ ದಿನವಾಗಿದ್ದು, ನಿಗದಿತ ದಿನಾಂಕದ ನಂತರ ಯಾವುದೇ ಕಾರಣಕ್ಕೂ ಅರ್ಜಿಗಳನ್ನು ನೀಡಲಾಗುವುದಿಲ್ಲ.
ಅರ್ಜಿ ಸ್ವೀಕರಿಸಿದ ನಂತರ ಅರ್ಜಿದಾರರು ಜಿಲ್ಲಾಧಿಕಾರಿಗಳ ಕಚೇರಿಯಿಂದ ಈಗಾಗಲೇ ರಚಿಸಲಾಗಿರುವ ತಾಲೂಕು ಮಟ್ಟದ ಸಮಿತಿಯಿಂದ
(ಅಗ್ನಿಶಾಮಕ ಇಲಾಖೆ, ತಹಶೀಲ್ದಾರರು, ಸ್ಥಳೀಯ ಸಂಸ್ಥೆ ಹಾಗೂ ಪೊಲೀಸ್ ಇಲಾಖೆರವರಿಂದ) ನೇರವಾಗಿ ಓಔಅ (ನಿರಾಕ್ಷೇಪಣಾ ಪತ್ರ)ವನ್ನು ಪಡೆಯಬೇಕು.
ಈ ರೀತಿ ಪಡೆದ ಓಔಅ (ನಿರಾಕ್ಷೇಪಣಾ ಪತ್ರ) ಗಳನ್ನು ಇ-5 ನಮೂನೆ, ಪ್ರಸ್ತಾವಿತ ಜಮೀನಿನ ನಕ್ಷೆ ಹಾಗೂ ಇತ್ತೀಚಿನ ಪಹಣಿ ಪತ್ರ ದಾಖಲೆಗಳು ಹಾಗೂ ತಾಲೂಕು ಮಟ್ಟದ ಸಮಿತಿಯಿಂದ ಪಡೆದಿರುವ ನಿರಾಕ್ಷೇಪಣಾ ಪತ್ರದೊಂದಿಗೆ ಸಲ್ಲಿಸಿದ್ದಲ್ಲಿ ತಾತ್ಕಾಲಿಕ ಪಟಾಕಿ ಮಾರಾಟ ಪರವಾನಿಗೆ ನೀಡಲು ಕ್ರಮಕೈಗೊಳ್ಳಲಾಗುವುದು.
ತಾಲೂಕು ಮಟ್ಟದ ಸಮಿತಿಯು ನಿಗದಿಪಡಿಸುವ ಸಾರ್ವಜನಿಕ ವಸತಿ ಹಾಗೂ ಅಂಗಡಿ ಇರುವ ಸ್ಥಳಗಳಿಂದ ದೂರವಿರುವ ಮೈದಾನ ಅಥವಾ ಬಯಲು ಪ್ರದೇಶಗಳಲ್ಲಿ ಮಾತ್ರ ತಾತ್ಕಾಲಿಕ ಸುಡುಮದ್ದು ಮಾರಾಟ ಮಳಿಗೆಗಳನ್ನು ತೆರೆಯಬಹುದಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.