ಉಡುಪಿ:ತ್ರಿಶಾ ಕ್ಲಾಸಸ್: 25 ದಿನಗಳ ಸಿಎ ಫೌಂಡೇಶನ್ ಕ್ರ್ಯಾಶ್ ಕೋರ್ಸ್

ಉಡುಪಿ:ತ್ರಿಶಾ ಕ್ಲಾಸಸ್ ವತಿಯಿಂದ ಈ ಬಾರಿ ಮೇ ತಿಂಗಳಲ್ಲಿ ಸಿಎ ಫೌಂಡೇಶನ್ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಕ್ರ್ಯಾಶ್ ಕೋರ್ಸ್ ಆರಂಭವಾಗುತ್ತಿದ್ದು, ಮಾರ್ಚ್ 24ರಿಂದ ತರಗತಿಗಳು ಆರಂಭವಾಗಲಿದೆ.

ನುರಿತ ಅಧ್ಯಾಪಕ ವೃಂದ, ರಿವಿಜನ್ ಪುಸ್ತಕಗಳು, , ಐಸಿಎಐ ಮಾದರಿಯ ಪೂರ್ವ ಸಿದ್ಧತಾ ಪರೀಕ್ಷೆಗಳು , ಪರೀಕ್ಷೆಯನ್ನು ಸುಲಭವಾಗಿ ಎದುರಿಸಲು ಸಲಹೆ ಸೂಚನೆಗಳು ಇತ್ಯಾದಿಗಳು ತರಗತಿಯ ವೈಶಿಷ್ಟ್ಯಗಳಾಗಿವೆ.

ವಿದ್ಯಾರ್ಥಿಗಳಲ್ಲಿ ಪರೀಕ್ಷೆಯನ್ನು ಎದುರಿಸಲು ಬೇಕಾದ ಆತ್ಮವಿಶ್ವಾಸ, ಉತ್ತಮ ಫಲಿತಾಂಶ ಪಡೆಯುವ ನಿಟ್ಟಿನಲ್ಲಿ ಈ ಕ್ರ್ಯಾಶ್ ಕೋರ್ಸ್ ನ್ನು ಆಯೋಜಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ಮಾಹಿತಿಗೆ ಉಡುಪಿಯ ಕೋರ್ಟ್ ಮುಂಭಾಗದಲ್ಲಿರುವ ತ್ರಿಶಾ ಕ್ಲಾಸಸ್ ಕಛೇರಿ , ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜಿಗೆ ಅಥವಾ ಮಂಗಳೂರಿನ ತ್ರಿಶಾ ಕ್ಲಾಸಸ್, ವಿದ್ಯಾರ್ಥಿ ಗ್ರಾಮ, ಗಣೇಶ್ ಬಾಗ್ ಲೇಔಟ್, ಕೊಟ್ಟಾರ ಕ್ಯಾಂಪಸ್ ಗೆ ಭೇಟಿ ನೀಡಬಹುದು ಎಂದು ಸಂಸ್ಥೆ ಪ್ರಕಟಣೆ ತಿಳಿಸಿದೆ.