ಉಡುಪಿ:ದೊಡ್ಡಣಗುಡ್ಡೆೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಇಂದು ಅಷ್ಟೋತ್ತರ ಶತನಾಳಿಕೇರ ಗಣಯಾಗ

ಉಡುಪಿ: ಶ್ರೀಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಎ. 16ರಂದು ಅಷ್ಟೋತ್ತರ ಶತ ನಾಳಿಕೇರ ಗಣಯಾಗ ನೆರವೇರಲಿದೆ.

ಕ್ಷೇತ್ರದ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿಯವರ ಮಾರ್ಗದರ್ಶನದಲ್ಲಿ ನೆರವೇರಲಿರುವ ಗಣಯಾಗವು ಕ್ಷೇತ್ರದಲ್ಲಿ ಶೀಘ್ರದಲ್ಲಿಯೇ ಪ್ರತಿಷ್ಠಾಪನೆಗೊಳ್ಳಲಿರುವ ಹಂಸಾರೂಢ ಪಂಚಮುಖಿ ಗಾಯತ್ರಿ ದೇವಿಯ ಪ್ರತಿಷ್ಠಾಪನೆಯ ಪೂರ್ವಭಾವಿ ಪ್ರಾಯಶ್ಚಿತ್ತ ಕರ್ಮಾಂಗ ಧಾರ್ಮಿಕ ಕಾರ್ಯಕ್ರಮವಾಗಿ ನಡೆಯಲಿದೆ ಎಂದು ಕ್ಷೇತ್ರದ ಉಸ್ತುವಾರಿ ಕುಸುಮಾ ನಾಗರಾಜ್ ಪ್ರಕಟನೆಯಲ್ಲಿ ತಿಳಿಸಿದ್ದಾಾರೆ.