ಉಡುಪಿ:ಬೈ.ಪ.ಪಂಚಾಯತ್: ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಪ್ರತ್ಯೇಕ ಪರವಾನಗಿ

ಉಡುಪಿ: ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಎಲ್ಲಾ ತಂಬಾಕು ಉತ್ಪನ್ನಗಳ ಮಾರಾಟಗಾರರು, ಕಡ್ಡಾಯವಾಗಿ ಪ್ರತ್ಯೇಕ ಪರವಾನಿಗೆ ಪಡೆದು ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡಬೇಕು ಮತ್ತು ಶಾಲಾ ಆವರಣದಿಂದ ಕನಿಷ್ಟ 100 ಮೀಟರ್ ಅಂತರದಲ್ಲಿ ಯಾವುದೇ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದು ಕೋಟ್ಪಾ 2003 ರ ಕಾಯಿದೆಯಂತೆ ನಿಷೇಧಿಸಲಾಗಿದ್ದು, ತಂಬಾಕು ಉತ್ಪನ್ನಗಳ ಮಾರಾಟ ಕಂಡುಬಂದಲ್ಲಿ ಉದ್ದಿಮೆ ಪರವಾನಿಗೆ ರದ್ದುಪಡಿಸಿ, ದಂಡ ವಿಧಿಸಿ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಬೈಂದೂರು ಪಟ್ಟಣ ಪಂಚಾಯತ್‌ನ ಕಚೇರಿ ಪ್ರಕಟಣೆ ತಿಳಿಸಿದೆ.