ಉಡುಪಿ:ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ : ಅರ್ಜಿ ಆಹ್ವಾನ

ಉಡುಪಿ: ಉಡುಪಿ ತಾಲೂಕಿನ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು
ಪರಿಶಿಷ್ಟ ಪಂಗಡದ ಅರ್ಹ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಮಂಜೂರಾತಿಗಾಗಿ ಸಂಬಂಧಪಟ್ಟ ಕಾಲೇಜು ಪ್ರಾಂಶುಪಾಲರು ವಿದ್ಯಾರ್ಥಿಗಳ ದಾಖಲೆಗಳೊಂದಿಗೆ ನೇರವಾಗಿ ಇಲಾಖಾ ವೆಬ್‌ಸೈಟ್ ಪರಿಶಿಷ್ಟ ಜಾತಿ SW.KAR.NIC.IN, ಪರಿಶಿಷ್ಟ ಪಂಗಡ: TW.KAR.NIC.IN ಅಥವಾ http://ssp.karnataka.gov.in ಲಿಂಕ್‌ಗೆ ಲಾಗಿನ್ ಆಗಿ ಸಂಪೂರ್ಣ ಮಾಹಿತಿಯನ್ನು ನೀಡಿ ಕಡ್ಡಾಯವಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.

ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಿದ ಪ್ರತಿ ವಿದ್ಯಾರ್ಥಿಗಳು ಬ್ಯಾಂಕ್ ಖಾತೆಗೆ ಆಧಾರ್ ಸೀಡ್ ಹಾಗೂ NPCI ಮ್ಯಾಪಿಂಗ್ ಮಾಡಿಸುವುದು ಕಡ್ಡಾಯವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ: 0820-2528884 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.