ಮಂಗಳೂರು : ಉಡುಪಿಯಲ್ಲಿ ಮೀನು ಕದ್ದ ನೆಪದಲ್ಲಿ ಕಾರ್ಮಿಕ ಮಹಿಳೆಯನ್ನು ಕಲಬಕ್ಕೆ ಕಟ್ಟಿ ಹಾಕಿ ಥಳಿಸಿರುವ ಘಟನೆ ನಿಜಕ್ಕೂ ಖೇದಕರ ಎಂದು ವಿಧಾನ ಪರಿಷತ್ ಸದಸ್ಯ ಡಾ ಮಂಜುನಾಥ ಭಂಡಾರಿ ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಅವರು, ಸಂಸ್ಕೃತಿಯ ನಾಡು ದೇಗುಲಗಳ ಬೀಡು ಎಂದೇ ಕರೆಯಲ್ಪಡುವ ಉಡುಪಿ ಜಿಲ್ಲೆಗೆ ಇಂತಹ ಘಟನೆಗಳು ಶೋಭೆ ತರುವಂತದಲ್ಲ. ಘಟನೆ ಕುರಿತು ಸೂಕ್ತ ಕ್ರಮಕ್ಕೆ ನಾಗರಿಕರು ಒತ್ತಾಯಿಸಿರುವ ಹಿನ್ನೆಲೆಯಲ್ಲಿ ಗೃಹ ಸಚಿವರಲ್ಲಿ ಘಟನೆಯನ್ನು ವಿವರಿಸಿ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದೇನೆ. ಮುಂದೆ ಇಂತಹ ಕೃತ್ಯ ನಾಗರಿಕ ಸಮಾಜದಲ್ಲಿ ಜರುಗದಂತೆ ಎಚ್ಚರಿಕೆ ವಹಿಸುವಂತೆ ಸಭ್ಯ ನಾಗರಿಕರು ಹಾಗೂ ಪೊಲೀಸ್ ಇಲಾಖೆ ಮುನ್ನಚ್ಚರಿಕೆ ವಹಿಸಬೇಕಿದೆ ಎಂದು ಡಾ ಭಂಡಾರಿ ಹೇಳಿದ್ದಾರೆ.












