ಉಡುಪಿ: ಮಾಬುಕಳದಲ್ಲಿ ಕೋಳಿ ಅಂಗಡಿ ನಡೆಸುತ್ತಿದ್ದ ಬ್ರಹ್ಮಾವರ ತಾಲೂಕು ಹಂಗಾರಕಟ್ಟೆ ಬಾಳ್ಕುದ್ರು
ನಿವಾಸಿ ಸ್ಟೀವನ್ ಪಾಯಸ್ (49) ಎಂಬ ವ್ಯಕ್ತಿಯು ಮಾರ್ಚ್ 31 ರಂದು ಬೆಳಗ್ಗೆ 5 ಗಂಟೆಯ ಸುಮಾರಿಗೆ ಕೋಳಿ ಅಂಗಡಿಗೆ ಹೋಗುತ್ತೇನೆ ಎಂದು ಹೇಳಿ ಮೊಬೈಲ್ ಫೋನ್ ಅನ್ನು ಮನೆಯಲ್ಲಿಯೇ ಬಿಟ್ಟು ಹೋದವರು ಅಂಗಡಿಗೂ ಹೋಗದೇ ಮನೆಗೂ ಬಾರದೇ ನಾಪತ್ತೆಯಾಗಿರುತ್ತಾರೆ.
5 ಅಡಿ 5 ಇಂಚು ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಶರೀರ, ಕೋಲು ಮುಖ ಹೊಂದಿದ್ದು, ಕನ್ನಡ, ಹಿಂದಿ ಹಾಗೂ ಕೊಂಕಣಿ ಭಾಷೆ ಮಾತನಾಡುತ್ತಾರೆ.
ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕೋಟ ಪೊಲೀಸ್ ಠಾಣೆ ದೂ.ಸಂಖ್ಯೆ: 0820-2564155, ಮೊ.ನಂ: 9480805454, ಉಡುಪಿ ಪೊಲೀಸ್ ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 0820-2561966, ಮೊ.ನಂ: 9480805432 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕೋಟ ಪೊಲೀಸ್ ಠಾಣೆಯ ಉಪನಿರೀಕ್ಷಕರ ಕಚೇರಿ ಪ್ರಕಟಣೆ ತಿಳಿಸಿದೆ.












