ಉಡುಪಿ: ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ಕುದಿ ಗ್ರಾಮದ ಕೊಂಡಾಡಿ ದರ್ಖಾಸು ನಿವಾಸಿ ವಾಸು ನಾಯ್ಕ್ (58) ಎಂಬ ವ್ಯಕ್ತಿಯು 2024 ರ ಏಪ್ರಿಲ್ 18 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.
5 ಅಡಿ ಎತ್ತರ, ಸಾಧಾರಣ ಶರೀರ, ಗೋಧಿ ಮೈಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ.
ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಹಿರಿಯಡ್ಕ ಪೊಲೀಸ್ ಠಾಣೆ ಪಿ.ಎಸ್.ಐ ಮೊ.ನಂ: 9480805452 ಹಾಗೂ ಬ್ರಹ್ಮಾವರ ವೃತ್ತ ನಿರೀಕ್ಷಕರ ಕಚೇರಿ ಮೊ.ನಂ: 9480805432 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿರಿಯಡ್ಕ ಪೊಲೀಸ್ ಠಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.












