ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀಕೃಷ್ಣ ಜಯಂತಿ ಕಾರ್ಯಕ್ರಮವು ಆಗಸ್ಟ್ 26 ರಂದು ಬೆಳಗ್ಗೆ 10 ಗಂಟೆಗೆ ನಗರದ ಡಯಟ್ ಹತ್ತಿರದ ಸರಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ನಡೆಯಲಿದೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯನಾಗರೀಕರ ಸಬಲೀಕರಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳಕರ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಶಾಸಕ ಯಶ್ಪಾಲ್ ಎ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಶಿವರಾಜ ಎಸ್.ತಂಗಡಗಿ, ಸಂಸದರಾದ ಬಿ.ವೈ ರಾಘವೇಂದ್ರ ಹಾಗೂ ಕೋಟ ಶ್ರೀನಿವಾಸ ಪೂಜಾರಿ, ಶಾಸಕರುಗಳಾದ ವಿ ಸುನಿಲ್ ಕುಮಾರ್ ಗುರುರಾಜ್ ಶೆಟ್ಟಿ ಗಂಟಿಹೊಳೆ, ಎ ಕಿರಣ್ ಕುಮಾರ್ ಕೊಡ್ಗಿ ಹಾಗೂ
ಗುರ್ಮೆ ಸುರೇಶ್ ಶೆಟ್ಟಿ, ವಿಧಾನಪರಿಷತ್ ಶಾಸಕರುಗಳಾದ ಎಸ್.ಎಲ್. ಭೋಜೇಗೌಡ, ಮಂಜುನಾಥ್ ಭಂಡಾರಿ ಹಾಗೂ ಡಾ. ಧನಂಜಯ ಸರ್ಜಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸತ್ಯವತಿ ಜಿ, ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ
ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ, ಜಿಲ್ಲಾ ಯಾದವ ಗೊಲ್ಲ ಸಮಾಜ ಸಂಘದ (ರಿ) ಅಧ್ಯಕ್ಷ ದಯಾನಂದ ಬಿ.ಆರ್, ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಅಧ್ಯಕ್ಷ ನೀಲಾವರ ಸುರೇಂದ್ರ
ಅಡಿಗ, ಸರಕಾರಿ ಬಾಲಕಿಯರ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಇಂದಿರಾ ಬಿ ಹಾಗೂ ಮತ್ತಿತರರು ಭಾಗವಹಿಸಲಿದ್ದು, ಬೆಂಗಳೂರಿನ
ರಾಷ್ಟ್ರೀಯ ಸಂತ ಕವಿ ಕನಕದಾಸ ಅಧ್ಯಯನ ಮತ್ತು
ಸಂಶೋಧನಾ ಕೇಂದ್ರದ ಸದಸ್ಯೆ ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಉಪನ್ಯಾಸ ನೀಡಲಿದ್ದಾರೆ.












