ಉಡುಪಿ:ಸರಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ

udupixpress

ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನ ಜಿಲ್ಲಾ ಮಟ್ಟದ ಕರ್ನಾಟಕ ರಾಜ್ಯ ಸರಕಾರಿ ನೌಕರರ ಕ್ರೀಡಾಕೂಟವು ಮಾರ್ಚ್ 14 ಮತ್ತು 15 ರಂದು ನಗರದ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.

ಕ್ರೀಡಾಕೂಟವು ಮಾರ್ಚ್ 14 ರಂದು ಬೆಳಗ್ಗೆ 9 ಗಂಟೆಗೆ ಪ್ರಾರಂಭವಾಗುವುದು. ಕ್ರೀಡಾಕೂಟದಲ್ಲಿ ಭಾಗವಹಿಸುವ ಸರಕಾರಿ ನೌಕರರು ನಿಗದಿತ ನಮೂನೆಯಲ್ಲಿ ಮಾರ್ಚ್ 10 ರೊಳಗಾಗಿ ಸಹಾಯಕ ನಿದೇಶಕರ ಕಛೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ಇವರಿಗೆ ಕಳುಹಿಸಬೇಕು.

ನೌಕರರಿಗೆ ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧಾ ವಿಭಾಗದಲ್ಲಿ ವೈಯಕ್ತಕ ಹಾಗೂ ಗುಂಪು ಸ್ಪರ್ಧೆಗಳು ನಡೆಯಲಿದ್ದು, ಓರ್ವ ನೌಕರನು ವೈಯಕ್ತಿಕ ವಿಭಾಗದ ಮೂರು ಹಾಗೂ ಗುಂಪು ವಿಭಾಗದ ಎರಡು ಸ್ಪರ್ಧೆಗಳಲ್ಲಿ ಭಾಗವಹಿಸಬಹುದಾಗಿದೆ. ಒಂದು ಸ್ಪರ್ಧೆಯಲ್ಲಿ ಐದಕ್ಕಿಂತ ಕಡಿಮೆ ಸ್ಪರ್ಧಾಳುಗಳಿದ್ದಲ್ಲಿ ಅಂತಹ ಸ್ಪರ್ಧಿಗೆ ರಾಜ್ಯ ಮಟ್ಟಕ್ಕೆ ನೇರವಾಗಿ ಆಯ್ಕೆ ಮಾಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾಧಿಕಾರಿಗಳ ಕಛೇರಿ ಅಥವಾ ಸರಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.