ಉಡುಪಿ ಅಂಬಾಗಿಲಿನಲ್ಲಿ ಅಗ್ನಿ ಅವಘಡ; ಸುಟ್ಟು ಕರಕಲಾದ ಗುಜರಿ ಗೋಡೌನ್

ಉಡುಪಿ: ಗುಜರಿ ಸಾಮಾನು‌ ದಾಸ್ತಾನು ಇರಿಸಿದ್ದ ಗೋಡೌನ್ ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಉಡುಪಿ ಅಂಬಾಗಿಲಿನ ಸಂತೋಷ್ ನಗರದಲ್ಲಿ ಇಂದು‌ ಸಂಭವಿಸಿದೆ.

ಹನಿಫ್ ಎಂಬರಿಗೆ ಸೇರಿದ ಗುಜರಿ ಅಂಗಡಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಲಕ್ಷಾಂತರ ಮೌಲ್ಯದ ಗುಜರಿ ಸಾಮಾನು ಸುಟ್ಟು ಹೋಗಿವೆ. ಬೆಂಕಿಯ ಕೆನ್ನಾಲಿಗೆ ಗೋಡೌನ್ ತುಂಬಾ ವ್ಯಾಪಿಸಿದ್ದು, ಗೋಡೌನ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಬೆಂಕಿಯ ಕೆನ್ನಾಲಿಗೆ ತೀವ್ರಗೊಂಡ ಹಿನ್ನಲೆಯಲ್ಲಿ ಅಕ್ಕ ಪಕ್ಕದ ಮನೆ ಯವರನ್ನು ಅಗ್ನಿಶಾಮಕ ಇಲಾಖೆಯ ಸಿಬ್ಬಂದಿ ತೆರವು ಮಾಡಿದ್ದಾರೆ. ಅಗ್ನಿಶಾಮಕ ಇಲಾಖೆಯ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ಮುಂದುವರಿಸಿದ್ದಾರೆ.