ಉಡುಪಿ: ಯಕ್ಷಗಾನ ಕಲಾವಿದ, ತಾಳಮದ್ದಳೆ ಅರ್ಥದಾರಿ, ಕೀರ್ತಿಶೇಷ ಅಂಬಾತನಯ ಮುದ್ರಾಡಿ ಸ್ಮರಣಾರ್ಥ ನೀಡುವ ಸಂಸ್ಮರಣಾ ಪ್ರಶಸ್ತಿಗೆ ಬೆಂಗಳೂರಿನ ಉಪನ್ಯಾಸಕ ಎನ್.ಸಿ.ಮಹೇಶ್ ಅವರ ಸಾಕುತಂದೆ ರೂಮಿ ನಾಟಕ ಕೃತಿ ಆಯ್ಕೆಯಾಗಿದೆ.
ಪ್ರಶಸ್ತಿ ಪ್ರದಾನ ಸಮಾರಂಭವು ವಿಶ್ವರಂಗಭೂಮಿ ದಿನವಾದ ಮಾ.27ರಂದು ರಂಗಭೂಮಿ ಉಡುಪಿ ಹಾಗೂ ತಲ್ಲೂರ್ಸ್ ಫ್ಯಾಮಿಲಿ ಟ್ರಸ್ಟ್ ಸಹಯೋಗದಲ್ಲಿ ಉಡುಪಿಯ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ.
ಪ್ರಶಸ್ತಿ ಪತ್ರ, ಸ್ಮರಣಿಕೆ ಮತ್ತು 15 ಸಾವಿರ ರೂ. ನಗದು ಬಹುಮಾನ ಒಳಗೊಂಡಿದೆ. ಮೂವರು ತೀರ್ಪುಗಾರರ ಸಮಿತಿಯ ಸಲಹೆಯಂತೆ ಈ ಕೃತಿ ಆಯ್ಕೆ ಮಾಡಲಾಗಿದೆ ಎಂದು ರಂಗಭೂಮಿ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.












