ಉಡುಪಿ: ವೈದ್ಯರ ದಿನದ ಪ್ರಯುಕ್ತ ಉಡುಪಿಯ ಆದರ್ಶ ಆಸ್ಪತ್ರೆಯಲ್ಲಿ ಜು.7 ರಂದು ಬೆಳಿಗ್ಗೆ 9:30ಕ್ಕೆ ವೈದ್ಯರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮವನ್ನು ಉಡುಪಿ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಅವರು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಐ.ಪಿ ಗಡಾದ, ಜಿಲ್ಲಾ ಸರ್ಜನ್ ಡಾ. ಅಶೋಕ್ ಎಚ್, ಆದರ್ಶ ಆಸ್ಪತ್ರೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಮಲಾ ಚಂದ್ರಶೇಖರ್ ಉಪಸ್ಥಿತರಿರಲಿದ್ದಾರೆ.
ಈ ಸಮಾರಂಭದಲ್ಲಿ ಗ್ರಾಮೀಣ ಪ್ರದೇಶದಲ್ಲಿ ಸೇವೆ ನೀಡಿದ ಕಾಪುವಿನ ಪ್ರಶಾಂತ್ ಅಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ| ಪ್ರಶಾಂತ್ ಕುಮಾರ್ ಶೆಟ್ಟಿ, ಮಲ್ಪೆಯ ದೇವ್ ಕ್ಲಿನಿಕ್ನ ಡಾ| ರಾಮಚಂದ್ರ ದೇವಾಡಿಗ, ಬ್ರಹ್ಮಾವರದ ಡಾ| ಪ್ರವೀಣ್ ಕುಮಾರ್ ಶೆಟ್ಟಿ, ಕಾರ್ಕಳ ತಾಲೂಕು ಸರಕಾರಿ ಆಸ್ಪತ್ರೆಯ ರೇಡಿಯಾಲಾಜಿಸ್ಟ್ ಡಾ| ಅನಿತಾ ಎಸ್ ಪ್ರಭು ಹಾಗೂ ಕುಂದಾಪುರ ತಾಲೂಕು ಸರಕಾರಿ ಆಸ್ಪತ್ರೆಯ ಹೆರಿಗೆ ಮತ್ತು ಸ್ತ್ರೀ ರೋಗ ತಜ್ಞರಾದ ಡಾ| ಚಂದ್ರ ಮರಕಾಲ ಅವರು ವೈದ್ಯಕೀಯ ಕ್ಷೇತ್ರದಲ್ಲಿ ನೀಡಿದ ವಿಶೇಷ ಸೇವೆಯನ್ನು ಪರಿಗಣಿಸಿ ಸನ್ಮಾನಿಸಿ ಗೌರವಿಸಲಾಗುತ್ತದೆ.