ಉಡುಪಿ: ಆ. 25ರಂದು ಗುರು ಸಂದೇಶ ಸಾಮರಸ್ಯ ಜಾಥ

ಉಡುಪಿ: ನಾರಾಯಣಗುರುಗಳ 170ನೇ ಜನ್ಮದಿನಾಚರಣೆಯ ಪ್ರಯುಕ್ತ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯ ವತಿಯಿಂದ ಗುರು ಸಂದೇಶ ಸಾಮರಸ್ಯ ಜಾಥವನ್ನು ಇದೇ ಆ. 25ರಂದು ಉಡುಪಿಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಬಿಲ್ಲವ ಯುವ ವೇದಿಕೆಯ ಅಧ್ಯಕ್ಷ ಪ್ರವೀಣ್ ಎಮ್.ಪೂಜಾರಿ ಹೇಳಿದರು.

ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ‌ ಮಾತನಾಡಿದ ಅವರು, ಅಂದು ಮಧ್ಯಾಹ್ನ 2 ಗಂಟೆಗೆ ಬನ್ನಂಜೆ ನಾರಾಯಣಗುರು ಮಂದಿರದಲ್ಲಿ‌ ಉಡುಪಿ ಶಾಸಕ ಯಶ್ ಪಾಲ್ ಎ. ಸುವರ್ಣ, ಮಾಜಿ ಶಾಸಕ ಕೆ ರಘುಪತಿ ಭಟ್, ಸಮಾಜ ಸೇವಕರಾದ ನಿತ್ಯಾನಂದ ಒಳಕಾಡು ಜಾಥಕ್ಕೆ ಚಾಲನೆ ನೀಡಲಿದ್ದಾರೆ. ಬಳಿಕ‌ ಜಾಥವು ಬನ್ನಂಜೆಯಿಂದ ಉಡುಪಿ ಸಿಟಿ ಬಸ್ ನಿಲ್ದಾಣ, ಕೋರ್ಟ್ ರೋಡ್, ಜೋಡುಕಟ್ಟೆ, ಬ್ರಹ್ಮಗಿರಿ, ಅಂಬಲಪಾಡಿ ಬೈಪಾಸ್, ಕರಾವಳಿ ಬೈಪಾಸ್, ಅಂಬಾಗಿಲು, ಗುಂಡಿಬೈಲು, ಕಲ್ಸಂಕ, ಮಾರ್ಗವಾಗಿ ಬನ್ನಂಜೆ ತಲುಪಲಿದೆ. ಸಂಜೆ 5 ಗಂಟೆಗೆ ಬನ್ನಂಜೆ ನಾರಾಯಣ ಗುರು ಆಡಿಟೋರಿಯಂನಲ್ಲಿ ಸಮಾರೋಪ ಸಮಾರಂಭ ಜರಗಲಿದೆ ಎಂದರು.

ಉಡುಪಿ -ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ವಿಧಾನ ಪರಿಷತ್ ಸದಸ್ಯ ಬಿಕೆ ಹರಿಪ್ರಸಾದ್, ಶಾಸಕರಾದ ಸುನಿಲ್ ಕುಮಾರ್, ಉಮಾನಾಥ ಕೋಟ್ಯಾನ್, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಮಾಜಿ ಶಾಸಕ ಗೋಪಾಲ ಪೂಜಾರಿ ಬೈಂದೂರು, ಕುದ್ರೋಳಿ ಗುರು ಬೆಳದಿಂಗಳು ಸಂಸ್ಥೆಯ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ, ಕಟಪಾಡಿ ವಿಶ್ವನಾಥ ಕ್ಷೇತ್ರದ ಅಧ್ಯಕ್ಷ ಬಿ. ಎನ್. ಶಂಕರ್ ಪೂಜಾರಿ, ರಾಷ್ಟ್ರೀಯ ಬಿಲ್ಲವ ಮಹಾಮಂಡಲ ಅಧ್ಯಕ್ಷರಾದ ರಾಜಶೇಖರ್ ಕೋಟ್ಯಾನ್, ಬನ್ನಂಜೆ ಬಿಲ್ಲವ ಸೇವಾ ಸಂಘ ಅಧ್ಯಕ್ಷ ಮಾಧವ ಬನ್ನಂಜೆ ಮೊದಲಾದವರು‌ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಭಾಕಾರ್ಯಕ್ರಮದ ಬಳಿಕ ಬನ್ನಂಜೆ ನಾರಾಯಣ ಗುರು ಸಭಾಭವನದಲ್ಲಿ ವೃತ್ತಿಪರ ಮೇಳ ಕಲಾವಿದರಿಂದ ತೆಂಕುತಿಟ್ಟು ತುಳು ಯಕ್ಷಗಾನ ‘ತುಳುನಾಡ ಬಲಿಯೇಂದ್ರ’ ಪ್ರದರ್ಶನಗೊಳ್ಳಲಿದೆ ಎಂದರು.