ಉಡುಪಿ : ಇಂದ್ರಾಳಿ ರೈಲ್ವೆ ಸೇತುವೆ ಕಾಮಗಾರಿ ವಿಳಂಬ ಹಿನ್ನೆಲೆ- ಸ್ಥಳಕ್ಕೆ ಡಿಸಿ ಎಸ್ಪಿ ಭೇಟಿ

ಉಡುಪಿ: ಗಡುವು ನೀಡಲಾಗಿದ್ದ ಅವಧಿಯಲ್ಲಿ ಇನ್ನೂ ಪೂರ್ಣಗೊಳ್ಳದ ರಾಷ್ಟ್ರೀಯ ಹೆದ್ದಾರಿ 169 ಎ ಇದರ ಇಂದ್ರಾಳಿ ಸೇತುವೆ ಕಾಮಗಾರಿ ಸ್ಥಳಕ್ಕೆ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೆ.ಅರುಣ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಹಳ ವರ್ಷಗಳಿಂದ ಕುಂಟುತ್ತಾ ಸಾಗುತ್ತಿರುವ ಇಂದ್ರಾಳಿ ಸೇತುವೆ ಕಾಮಗಾರಿ, ತೀವ್ರ ಜನಾಕ್ರೋಶದ ಬಳಿಕ ಜನವರಿ 15ರೊಳಗೆ ಪೂರ್ಣಗೊಳಿಸುವ ಕುರಿತು ಗುತ್ತಿಗೆದಾರರಿಂದ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಮುಚ್ಚಳಿಕೆ ಬರೆಸಿಕೊಳ್ಳಲಾಗಿತ್ತು. ಈ ಅವಧಿ ಮುಗಿದಿದ್ದರೂ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ.

ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಹಾಗೂ ಎಸ್ಪಿ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು.ಒಂದು ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಸಂಬಂಧಪಟ್ಟ ಗುತ್ತಿಗೆದಾರರಿಗೆ ಸೂಚನೆ ನೀಡಿದ್ದಾರೆ.