
ಉಡುಪಿ: ಉಡುಪಿ ನೇಜಾರಿನ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣದ ಆರೋಪಿ ಪ್ರವೀಣ್ ಅರುಣ್ ಚೌಗಲೆ ಎಂಬವನನ್ನು ಪೊಲೀಸರು ಇಂದು ಸಂಜೆ ಎಸಿಜೆ ಜೆಎಮ್ಎಫ್ ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದರು.
ಅಜೆಕಾರಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆರೋಪಿಯ ವೈದ್ಯಕೀಯ ತಪಾಸಣೆ ನಡೆಸಿದ ಪೊಲೀಸರು, ನೇರವಾಗಿ ಉಡುಪಿಯ ನ್ಯಾಯಾಲಯಕ್ಕೆ ಕರೆತಂದರು. ಬೀಗಿ ಪೊಲೀಸ್ ಬಂದೋಬಸ್ತ್ ನೊಂದಿಗೆ ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಯಿತು.













