ಉಡುಪಿ: ಕುಂಜಿಬೆಟ್ಟುವಿನಲ್ಲಿ ಎರಡು ತಂಡಗಳ ನಡುವೆ ಗ್ಯಾಂಗ್ ವಾರ್ – ಹೊಡೆದಾಟದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್..

ಉಡುಪಿ: ಉಡುಪಿಯ ಕುಂಜಿಬೆಟ್ಟುವಿನಲ್ಲಿ ಎರಡು ತಂಡಗಳ ನಡುವೆ ಗ್ಯಾಂಗ್ ವಾರ್ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಕಾಪು ಮೂಲದ ಎರಡು ತಂಡಗಳ ಯುವಕರು ಉಡುಪಿ – ಮಣಿಪಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರುಗಳಲ್ಲಿ ಬಂದು‌ ಜಗಳ ಮಾಡಿಕೊಂಡು ಕಾರಿನಲ್ಲಿಯೇ ಹೊಡೆದಾಟ ಮಾಡಿಕೊಂಡಿದ್ದಾರೆ.
ಮೇ.18ರಂದು ಉಡುಪಿ ಕುಂಜಿಬೆಟ್ಟುವಿನಲ್ಲಿ ನಡೆದಿರುವ ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಆರೋಪಿಗಳಿಗೆ ಜೂನ್ 1 ರ ವರೆಗೆ‌ ನ್ಯಾಯಂಗ ಬಂಧನ ವಿಧಿಸಿದ್ದಾರೆ. ಉಡುಪಿ ನಗರ‌ ಠಾಣೆಯಲ್ಲಿ ಪ್ರಕರಣ‌ ದಾಖಲಾಗಿದೆ.