ಉಡುಪಿ: ಖ್ಯಾತ ವಕೀಲ ಜಿ.ಮೋಹನ್ ದಾಸ್ ಶೆಟ್ಟಿ ಹೃದಯಾಘಾತದಿಂದ ನಿಧನ

ಉಡುಪಿ: ಜಿಲ್ಲೆಯ ಖ್ಯಾತ ವಕೀಲರಾದ ಜಿ ಮೋಹನ್ ದಾಸ್ ಶೆಟ್ಟಿ ಅವರು ಹೃದಯಾಘಾತದಿಂದ ಇಂದು ನಿಧನ ಹೊಂದಿದರು.

ಮನೆಯಲ್ಲಿ ಇರುವಾಗ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಮೋಹನ್ ಶೆಟ್ಟಿ ಅವರ ನಿಧನಕ್ಕೆ ಉಡುಪಿ ಬಾರ್ ಕೌನ್ಸಿಲ್ ತೀವ್ರ ಸಂತಾಪ ವ್ಯಕ್ತಪಡಿಸಿದೆ.