ಉಡುಪಿ: ಉಡುಪಿ ರಂಗಭೂಮಿ ವತಿಯಿಂದ ವೈದ್ಯ, ನಾಟಕಕಾರ, ಯಕ್ಷಗಾನ ಕಲಾವಿದ ಡಾ.ಭಾಸ್ಕರಾನಂದ ಕುಮಾರ್ ಅವರಿಗೆ ರಂಗಭೂಮಿ ಪ್ರಶಸ್ತಿಯನ್ನು ರವಿವಾರ ಉಡುಪಿ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ಪ್ರದಾನ ಮಾಡಲಾಯಿತು.
ಮುಖ್ಯ ಅತಿಥಿಗಳಾಗಿ ಮಂಗಳೂರು ಶಾರದಾ ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ.ಎಂ.ಬಿ.ಪುರಾಣಿಕ್, ಕಾಲೇಜಿನ ಪ್ರಾಂಶು ಪಾಲ ಪ್ರೊ.ಲಕ್ಷ್ಮೀನಾರಾಯಣ ಕಾರಂತ್, ಕಸಾಪ ದ.ಕ. ಜಿಲ್ಲಾ ಮಾಜಿ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಮಾತನಾಡಿದರು.
ಉಡುಪಿ ಕೋ ಆರಪೇಟಿವ್ ಟೌನ್ ಬ್ಯಾಂಕಿನ ಅಧ್ಯಕ್ಷ ಎಚ್.ಜಯಪ್ರಕಾಶ್ ಕೆದ್ಲಾಯ ಪ್ರಶಸ್ತಿ ಪುರಸ್ಕೃತರ ಪರಿಚಯ ಮಾಡಿ ದರು. ರಂಗಭೂಮಿ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ, ಉಪಾಧ್ಯಕ್ಷರಾದ ಭಾಸ್ಕರ ರಾವ್ ಕಿದಿಯೂರು, ಎನ್.ಆರ್.ಬಲ್ಲಾಳ್, ಪ್ರಧಾನ ಕಾರ್ಯದರ್ಶಿ ಪ್ರದೀಪ್ ಚಂದ್ರ ಕುತ್ಪಾಡಿ ಉಪಸ್ಥಿತರಿದ್ದರು.