ಉಡುಪಿ: ರಂಗಭೂಮಿ ಉಡುಪಿ ವತಿಯಿಂದ ನೀಡುವ 2025ರ ’ರಂಗಭೂಮಿ ಪ್ರಶಸ್ತಿಗೆ ಈ ಬಾರಿ ವೈದ್ಯ, ನಾಟಕಕಾರ ಹಾಗೂ ಯಕ್ಷಗಾನ ಮತ್ತು ನಾಟಕ ರಂಗದ ಹಿರಿಯ ಕಲಾವಿದ ಡಾ.ಭಾಸ್ಕರಾನಂದಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ.
ಫೆ.2ರಂದು ಉಡುಪಿ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ನಡೆಯುವ ಈ ಸಮಾರಂಭದಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಮಾಹೆ ಸಹ ಕುಲಾಧಿಪತಿ ಡಾ.ಎಚ್.ಎಸ್.ಬಲ್ಲಾಳ್ ಮತ್ತು ಹಲವು ಗಣ್ಯರ ಸಮಕ್ಷಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ರಂಗಭೂಮಿ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.