ಉಡುಪಿ: ಉಡುಪಿ ನಗರಸಭೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಎಸ್.ಎಫ್.ಸಿ ಮುಕ್ತನಿಧಿ ಹಾಗೂ ನಗರಸಭಾ ನಿಧಿಯಡಿ (ಶೇ.24.10) ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿ.ಯು.ಸಿ ಪಾಸಾದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ, ಇತರೆ ಬಡಜನರ ಕಲ್ಯಾಣ ಕಾರ್ಯಕ್ರಮದ (ಶೇ.7.25) ಅನುದಾನದಡಿ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿ.ಯು.ಸಿ ಪಾಸಾದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ, ವಿಕಲಚೇತನರ ಕಲ್ಯಾಣ ಕಾರ್ಯಕ್ರಮದ (ಶೇ.5) ಅನುದಾನದಡಿ ಸಣ್ಣ ಉದ್ದಿಮೆ, ಮನೆ ದುರಸ್ಥಿ, ಕೃತಕ ಅಂಗ ಜೋಡಣೆ ಹಾಗೂ ಶಸ್ತ್ರ ಚಿಕಿತ್ಸೆಗೆ ಧನಸಹಾಯ, ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಕಲೆ, ಕ್ರೀಡೆ, ಸಾಂಸ್ಕೃತಿಕ ಹಾಗೂ ಇತರೆ ವ್ಯಾಸಾಂಗೇತರ ಚಟುವಟಿಕೆಗಳಲ್ಲಿ ಭಾಗವಹಿಸುವ ವಿಕಲಚೇತನರಿಗೆ ಪ್ರೋತ್ಸಾಹಧನ ಹಾಗೂ ಎಸ್.ಎಸ್.ಎಲ್.ಸಿ ಯಿಂದ ಮಾಸ್ಟರ್ ಡಿಗ್ರಿವರೆಗಿನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಸೌಲಭ್ಯ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಡುಪಿ ನಗರಸಭಾ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.