ಉಡುಪಿ: ನಿಲ್ಲಿಸಿದ್ದ ಕಾರಿಗೆ ಇನ್ನೊಂದು ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಗುಡ್ಡೆ ಅಂಗಡಿ ಸಮೀಪ ಇಂದು ಸಂಭವಿಸಿದೆ.
ಘಟನೆಯಲ್ಲಿ ಓರ್ವ ವ್ಯಕ್ತಿ ಗಂಭೀರ ಗಾಯಗೊಂಡಿದ್ದು ಸ್ಥಳೀಯರ ಸಹಕಾರದಿಂದ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಘಟನಾ ಸ್ಥಳಕ್ಕೆ ಕಾಪು ಪೋಲಿಸರು ಆಗಮಿಸಿ ಪರಿಶೀಲನೆ ನಡೆಸಿದರು. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.













