ಉಡುಪಿ: ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ರ ಹಿನ್ನೆಲೆ, ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದ೦ತೆ ಏಪ್ರಿಲ್ 7 ರಂದು ಅಬಕಾರಿ ಇಲಾಖೆ ವತಿಯಿಂದ 1760 ರೂ. ಮೌಲ್ಯದ 3.960 ಲೀ ಮದ್ಯ ಹಾಗೂ ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 24,99,500 ರೂ ನಗದನ್ನು ವಶಪಡಿಸಿಕೊಳ್ಳಲಾಗಿರುತ್ತದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.