ಉಡುಪಿ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2023-24 ನೇ ಸಾಲಿನ ಶೈಕ್ಷಣಿಕ ಸಾಲಿನಲ್ಲಿ ನಡೆದ
ಪಿ.ಯು.ಸಿ, ಡಿಪ್ಲೋಮಾ, ಪದವಿ, ಸ್ನಾತಕೋತ್ತರ ಪದವಿ, ಮೆಡಿಕಲ್ ಇಂಜಿನಿಯರಿಂಗ್ ಸೇರಿದಂತೆ ವೃತ್ತಿಪರ ಕೋರ್ಸುಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಮಂಜೂರು ಮಾಡಲು ಅರ್ಹ ವಿದ್ಯಾರ್ಥಿಗಳಿಂದ ಇಲಾಖೆಯ ವೆಬ್ಸೈಟ್ www.sw.kar.nic.in ನ ಪ್ರೈಸ್ ಮನಿ ಅಪ್ಲಿಕೇಷನ್ನಲ್ಲಿ ಆನ್ಲೈನ್ ಮೂಲಕ
ಅರ್ಜಿ ಆಹ್ವಾನಿಸಲಾಗಿದೆ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿದ ನಂತರ ಒಂದು ವಾರದ ಒಳಗಾಗಿ ಅರ್ಜಿ ಹಾಗೂ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಕಾಲೇಜಿನ ಪ್ರಾಂಶುಪಾಲರಿಂದ ದೃಢೀಕರಿಸಿ, ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ, ಮಣಿಪಾಲ ಇಲ್ಲಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ದೂ.ಸಂಖ್ಯೆ: 0820-2574892 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.