ಉಡುಪಿ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯರ ಸಾಧನೆ.

ಉಡುಪಿ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 128 ವಿದ್ಯಾರ್ಥಿನಿಯರು ಪರೀಕ್ಷೆಯನ್ನು ಬರೆದಿದ್ದು ಎಲ್ಲರೂ ಉತ್ತೀರ್ಣರಾಗಿ ಶೇಕಡಾ 100 ಫಲಿತಾಂಶ ದಾಖಲಾಗಿರುತ್ತದೆ. ಅವರಲ್ಲಿ 68 ವಿದ್ಯಾರ್ಥಿನಿಯರು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರುತ್ತಾರೆ. 47 ವಿದ್ಯಾರ್ಥಿನಿಯರು ವಿಶಿಷ್ಟ ಶ್ರೇಣಿಯ ಅಂಕವನ್ನು ಗಳಿಸಿರುತ್ತಾರೆ 27 ಜನ A+ ಗ್ರೇಡನ್ನು ಪಡೆಯುವಲ್ಲಿ ಸಫಲರಾಗಿದ್ದಾರೆ. 9 ವಿದ್ಯಾರ್ಥಿನಿಯರು 600ಕ್ಕಿಂತ ಅಧಿಕ ಅಂಕಗಳನ್ನು ಗಳಿಸಿದ್ದಾರೆ.

ಎಲ್ಲ ಸಾಧಕ ವಿದ್ಯಾರ್ಥಿನಿಯರಿಗೆ ಅಭಿನಂದನೆಗಳನ್ನು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯವರು ಸಲ್ಲಿಸಿರುತ್ತಾರೆ.