ಉಡುಪಿ: ಬೀಡಿ ಕಾರ್ಮಿಕರ ಕನಿಷ್ಟ ವೇತನ ಹಾಗೂ ತುಟ್ಟಿ ಭತ್ಯೆಯನ್ನು ಕಡಿತಗೊಳಿಸಿದ ಸರಕಾರದ ಕ್ರಮವನ್ನು ಖಂಡಿಸಿ ಬೀಡಿ ಕಾರ್ಮಿಕರು ಇಂದು ಪ್ರತಿಭಟನೆ ನಡೆಸಿದರು.
ಈ ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಿ ಬೀಡಿ ಎಂಡ್ ಟ್ಯೂಬ್ಯಾಕೋ ಲೇಬರ್ ಯೂನಿಯನ್ ನೇತೃತ್ವದಲ್ಲಿ ಉಡುಪಿಯ ತಹಶೀಲ್ದಾರರ ಕಚೇರಿ ಮುಂದೆ ಸೇರಿದ ಕಾರ್ಮಿಕರು ಘೋಷಣೆಗಳನ್ನು ಕೂಗಿದರು.

ಸರಕಾರದ ಆದೇಶ ಪ್ರತಿ ಸುಟ್ಟು ಹಾಕಿದರು. ನಂತರ ತಹಶೀಲ್ದಾರ್ ಮೂಲಕ ಸಿಎಂ ಹಾಗೂ ಕಾರ್ಮಿಕ ಸಚಿವರಿಗೆ ಮನವಿ ನೀಡಲಾಯಿತು.


ಬೀಡಿ ಎಂಡ್ ಟೋಬ್ಯಾಕೋ ಲೇಬರ್ ಯೂನಿಯನ್ ಅಧ್ಯಕ್ಷೆ ನಳಿನಿ ಎಸ್.,ಪ್ರಧಾನ ಕಾರ್ಯದರ್ಶಿ ಉಮೇಶ್ ಕುಂದರ್, ಅಖಿಲ ಭಾರತ ಬೀಡಿ ಫೆಡರೇಶನ್ ಯೂನಿಯನ್ ಕೇಂದ್ರ ಸಮಿತಿ(ದೆಹಲಿ) ಸದಸ್ಯರಾದ ಕವಿರಾಜ್ .ಎಸ್.ಕಾಂಚನ್ ,ಸಿಐಟಿಯು ಉಡುಪಿ ಜಿಲ್ಲಾ ಕೋಶಾಧಿಕಾರಿ ಶಶಿಧರ ಗೋಲ್ಲ,ಸಮಿತಿ ಸದಸ್ಯರಾದ ಗಿರಿಜ,ವಸಂತಿ,ಶಾರದ ಉಪಸ್ಥಿತರಿದ್ದರು.












