ಉಡುಪಿ: ಯುವಕ ನಾಪತ್ತೆ

ಉಡುಪಿ: ಉಡುಪಿ ತಾಲೂಕು ಮೂಡನಿಡಂಬೂರು ಗ್ರಾಮದ ಬಾಡಿಗೆ ಮನೆಯಲ್ಲಿ ವಾಸವಿದ್ದ ಬಸವರಾಜ್ (27) ಎಂಬ ಯುವಕನು ನವೆಂಬರ್ 28 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 6 ಇಂಚು ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆಕಪ್ಪು ಮೈಬಣ್ಣ, ಉದ್ದಮುಖ ಹೊಂದಿದ್ದು, ಕನ್ನಡ ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ.

ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.