ಉಡುಪಿ: ಯುವತಿ ನಾಪತ್ತೆ

ಉಡುಪಿ: ಉಡುಪಿ ತಾಲೂಕು ಮೂಡನಿಡಂಬೂರು ಗ್ರಾಮದ ಸಿ.ಟಿ ಬಸ್ ನಿಲ್ದಾಣದ ಬಳಿ ಇರುವ ಪಿ.ಜಿ.ಯಲ್ಲಿ ವಾಸವಿದ್ದ ಅರ್ಚನಾ (19) ಎಂಬ ಯುವತಿಯು ನವೆಂಬರ್ 4 ರಿಂದ ಕಾಣೆಯಾಗಿರುತ್ತಾರೆ.

5 ಅಡಿ 2 ಇಂಚು ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆ ಕಪ್ಪು ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ.

ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.