ಉಡುಪಿ, ನ.18: ಉಡುಪಿ ಜಿಲ್ಲಾ ಪಂಚಾಯತ್ – ಶಾಲಾ ಶಿಕ್ಷಣ ಇಲಾಖೆ ಉಡುಪಿ – ಶ್ರೀ ಕ್ಷೇತ್ರ ಶಿಕ್ಷಾಧಿಕಾರಿಯವರ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಉಡುಪಿ ಮತ್ತು ಸರಕಾರಿ ಮಾದರಿ ಹಿರಿಯ ಪ್ರಾಥ ಮಿಕ ಶಾಲೆ ಒಳಕಾಡು ಇದರ ಸಂಯುಕ್ತ ಆಶ್ರಯದಲ್ಲಿ ಉಡುಪಿ ವಲಯ ಮಟ್ಟದ ಪ್ರಾತಮಿಕ ಹಾಗು ಪ್ರೌಢ ಶಾಲಾ ವಿಭಾಗದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ 2024-25, ನ.22 ರಂದು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಒಳಕಾಡು ಇಲ್ಲಿ ನಡೆಯಲಿದ್ದು, ಉದ್ಘಾಟನೆಯನ್ನು ಕರ್ನಾಟಕ ಸರಕಾರದ ಮಾನ್ಯ ಮಹಿಳಾ ಮತ್ತು ಮಕ್ಕಳ ಅಭಿ ವೃದ್ಧಿ ಸಚಿವರು ಹಾಗು ಹಿರಿಯ ನಾಗರಿಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಇವರು ಮಾಡಲಿದ್ದಾರೆ.
ಈ ಕಾರ್ಯಕ್ರಮಕ್ಕೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್.ಮಧು ಬಂಗಾರಪ್ಪ ಭಾಗವಹಿ ಸಲಿದ್ದಾರೆ. ಅಧ್ಯಕ್ಷತೆಯನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಶ್ರೀ ಯಶಪಾಲ್ ಸುವರ್ಣ ವಹಿಸಲಿದ್ದಾರೆ.
ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾಗಿರುವ ಕೋಟ ಶ್ರೀನಿವಾಸ್ ಪೂಜಾರಿ, ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ರಾಗಿರುವ ಗುರ್ಮೆ ಸುರೇಶ ಶೆಟ್ಟಿ, ವಿಧಾನ ಪರಿಷತ್ ಶಾಸಕ ಎಸ್ ಎಲ್ ಭೋಜೇಗೌಡ, ಮಂಜುನಾಥ್ ಭಂಡಾರಿ, ಡಾ.ಧನಂಜಯ ರ್ಜಿ, ಕಿಶೋರ್ ಕುಮಾರ್ ಪುತ್ತ್ತೂರು, ಉಡುಪಿ ನಗರಸಭಾ ಅಧ್ಯಕ್ಷ ಪ್ರಭಾಕರ್ ಪೂಜಾರಿ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ್ ಹೇರೂರು, ಕರ್ನಾಟಕ ಸರಕಾರದಕಾರ್ಯದರ್ಶಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಬೆಂಗಳೂರು ಹಾಗು ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜಿ. ಸತ್ಯವತಿ, ಉಡುಪಿ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ, ಉಡುಪಿ ಜಿಲ್ಲಾ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಪ್ರತೀಕ್ ಬಾಯಲ್, ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾಗಿರುವ ಅರುಣ್ ಕೆ, ಉಡುಪಿ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಆಡಳಿತ ವಿಭಾಗದ ಉಪನಿರ್ದೇಶಕ ಗಣಪತಿ ಕೆ. ಹಾಗು ಉಡುಪಿ ಡಯಟ್ ನ ಅಭಿವೃದ್ಧಿ ಉಪನಿರ್ದೇಶ ಕ ಗೋವಿಂದ ಮಡಿವಾಳ ಇವರು ಭಾಗವಹಿಸಲಿದ್ದಾರೆ.
ಈ ಕಾರ್ಯಕ್ರಮಕ್ಕೆ ಉಡುಪಿ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಯಲ್ಲಮ್ಮ ಹಾಗೂ ಇಲಾಖೆಯ ಎಲ್ಲ ಸಿಬ್ಬಂದಿ ವರ್ಗ ಮತ್ತು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಒಳಕಾಡು (ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗ) ಸರ್ವರಿಗೂ ಸ್ವಾಗತವನ್ನು ಬಯಸುತ್ತದೆ ಎಂದು ಶಾಲಾ ಪ್ರಕಟಣೆ ತಿಳಿಸಿದೆ.