ಉಡುಪಿ: ವಿಷದ ಹಾವು ಕಚ್ಚಿದ ಪರಿಣಾಮ ಗದ್ದೆಯಲ್ಲಿ ಕೆಲಸ ಮಾಡಿಕೊಂಡಿದ್ದ ಕೃಷಿಕರೊಬ್ಬರು ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಹೆಜಮಾಡಿಯಲ್ಲಿ ನ.20ರಂದು ಸಂಜೆ ವೇಳೆ ನಡೆದಿದೆ.
ಮೃತರನ್ನು ಹೆಜಮಾಡಿ ಗ್ರಾಮದ ಜಯಕರ(66) ಎಂದು ಗುರುತಿಸಲಾಗಿದೆ.
ಇವರು ಗದ್ದೆಯಲ್ಲಿ ಕೆಲಸ ಮಾಡುತ್ತಿರುವಾಗ ವಿಷದ ಹಾವು ಕಚ್ಚಿತ್ತೆನ್ನಲಾಗಿದೆ. ಇದರಿಂದ ತೀವ್ರವಾಗಿ ಅಸ್ವಸ್ಥಗೊಂಡ ಇವರು, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರೆಂದು ತಿಳಿದುಬಂದಿದೆ. ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












