ಉಡುಪಿ: ಬ್ರಹ್ಮಾವರ ತಾಲೂಕು ಯಡ್ತಾಡಿ ಗ್ರಾಮದ ನಿವಾಸಿ ನರಸಿಂಹ ಜೋಗಿ (78) ಎಂಬ ವೃದ್ಧರು 2024 ರ ಮೇ 6 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.
6 ಅಡಿ 1 ಇಂಚು ಎತ್ತರ, ಎಣ್ಣೆಕಪ್ಪು ಮೈಬಣ್ಣ, ಸಾಧಾರಣ ಶರೀರ, ಕೋಲು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ.
ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆ ದೂ.ಸಂಖ್ಯೆ: 0820-2461044, ಮೊ.ನಂ: 9480805453 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬ್ರಹ್ಮಾವರ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.












