ಉಡುಪಿ ಶ್ರೀಕೃಷ್ಣಮಠಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭೇಟಿ

ಉಡುಪಿ: ಉಡುಪಿ ಶ್ರೀಕೃಷ್ಣಮಠಕ್ಕೆ ಶನಿವಾರ ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಖಾತೆ ಸಚಿವ ಪ್ರಹ್ಲಾದ್ ಜೋಶಿ ಅವರು‌ ಭೇಟಿ ನೀಡಿ ದೇವರ ದರ್ಶನ ಮಾಡಿದರು.

ಬಳಿಕ ಪರ್ಯಾಯ ಪುತ್ತಿಗೆ ಸುಗುಣೇಂದ್ರತೀರ್ಥ ಶ್ರೀಪಾದರನ್ನು ಭೇಟಿಯಾಗಿ ಅನುಗ್ರಹ ಮಂತ್ರಾಕ್ಷತೆ ಪಡೆದರು. ಬಳಿಕ ಕೋಟಿಗೀತಾಲೇಖನ ಯಜ್ಞ ದೀಕ್ಷೆ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಯಶ್ ಪಾಲ್ ಸುವರ್ಣ, ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ, ಮಂಗಳೂರು ವಿಭಾಗ ಪ್ರಭಾರಿ ಉದಯಕುಮಾರ್ ಶೆಟ್ಟಿ, ಮುಖಂಡರಾದ ಶಶಾಂಕ್ ಸರಳಾತ್ತಾಯ ಸಾಥ್ ನೀಡಿದರು.