ಉಡುಪಿ: ಸಮುದ್ರದಲ್ಲಿ ಪತ್ತೆಯಾದ ಅಪರಿಚಿತ ಶವದ ಅಂತ್ಯಸಂಸ್ಕಾರ ನಡೆಸಿ ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು ಮತ್ತೊಮ್ಮೆ ಸಾರ್ಥಕತೆ ಮೆರೆದಿದ್ದಾರೆ.
ಮಣಿಪಾಲದ ಶೀತಲೀಕೃತ ಶವರಕ್ಷಣಾ ಘಟಕದಲ್ಲಿ ರಕ್ಷಿಸಿಡಲಾಗಿದ್ದ ಅಪರಿಚಿತ ಶವದ ಅಂತ್ಯಸಂಸ್ಕಾರವು, ಸಮಾಜಸೇವಕ ನಿತ್ಯಾನಂದ ಒಳಕಾಡುವರ ನೇತೃತ್ವದಲ್ಲಿ ಬೀಡಿನಗುಡ್ಡೆಯ ಹಿಂದು ರುದ್ರಭೂಮಿಯಲ್ಲಿ ನಡೆಸಲಾಗಿದೆ.
ಬೀಜಾಡಿ ಸಮುದ್ರ ಕಿನಾರೆಯಲ್ಲಿ ಕಳೆದ ಹತ್ತು ದಿನಗಳ ಹಿಂದೆ, ಕೊಳೆತ ಸ್ಥಿತಿಯಲ್ಲಿ ಗಂಡಸಿನ ಶವವು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಶವದ ವಾರಸುದಾರರು ಪತ್ತೆಯಾಗದೆ ಇರುವುದರಿಂದ ಕಾನೂನಿನಂತೆ ಅಂತ್ಯಸಂಸ್ಕಾರ ನಡೆಸಲಾಯಿತು.
ಕುಂದಾಪುರ ಪೋಲಿಸ್ ಠಾಣೆಯ ಹೆಡ್ ಕಾನ್ಸಟೇಬಲ್ ರಾಘವೇಂದ್ರ ಹಾಗೂ ಗೌತಮ್ ಕಾನೂನು ಪ್ರಕ್ರಿಯೆ ನಡೆಸಿದರು. ಪ್ಲವರ್ ವಿಷ್ಣು, ಜಿಲ್ಲಾಸ್ಪತ್ರೆ, ನಗರಸಭೆ, ಅಂತ್ಯಸಂಸ್ಕಾರ ಪ್ರಕ್ರಿಯೆಗೆ ಸಹಕರಿಸಿತು.