ಉಡುಪಿ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆತ್ರಾಡಿಯಲ್ಲಿ ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ ರಾಷ್ಟೀಯ ಮತದಾರರ ದಿನಾಚರಣೆಯನ್ನು ಜನವರಿ 25ರಂದು ಆಚರಿಸಲಾಯಿತು. ಮುಖ್ಯ ಶಿಕ್ಷಕಿ ಶ್ರೀಮತಿ ಸರಸ್ವತಿ ಎನ್. ಅವರು ಪ್ರತಿಜ್ಞಾ ವಿಧಿಯನ್ನು ಭೋದಿಸಿದರು.
ಕಾರ್ಯಕ್ರಮದಲ್ಲಿ ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಆತ್ರಾಡಿ ಸತ್ಯಾನಂದ ನಾಯಕ್, ಮಾಜಿ ಪಂಚಾಯತ್ ಅಧ್ಯಕ್ಷರಾದ ರತ್ನಾಕರ್ ಶೆಟ್ಟಿ, ಹಳೆವಿದ್ಯಾರ್ಥಿ ಸಂಘದ ಆರಂಭಿಕ ಸದಸ್ಯರು ಅಶೋಕ್ ಕಾಂಚನ್, ಮುಖ್ಯ ಶಿಕ್ಷಕಿ ಶ್ರೀಮತಿ ಸರಸ್ವತಿ ಎನ್, ಶಿಕ್ಷಕಿಯರಾದ ಶ್ರೀಮತಿ ಜ್ಯೋತಿ, ಶ್ರೀಮತಿ ಶಬನಾ ಪರ್ವೀನ್ ಶೇಖ್, ಶ್ರೀಮತಿ ಸುಹಾಸಿನಿ ,ಶ್ರೀಮತಿ ವಿಮಲಾ, ಶ್ರೀಮತಿ ಶಾರದಾ, ಅಂಗನವಾಡಿ ಶಿಕ್ಷಕಿ ಶ್ರೀಮತಿ ಜಯಂತಿ, ಆಶಾಕಾರ್ಯಕರ್ತೆ ಆಶಾ ನಾಯ್ಕ್, ಜರೀನಾ ಮೇಡಂ ಹಾಗೂ ಶಾಲಾ ವಿದ್ಯಾರ್ಥಿಗಳು ಹಾಜರಿದ್ದರು.