ಉಡುಪಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇವರ ವತಿಯಿಂದ ನಡೆಸುತ್ತಿರುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ವಿವಿಧ ವಸತಿ ಶಾಲೆಗಳಲ್ಲಿ 6 ನೇ ತರಗತಿಗೆ ಪ್ರವೇಶಾತಿ ಕಲ್ಪಿಸಲು ನಡೆಯಲಿರುವ ಪ್ರವೇಶ ಪರೀಕ್ಷೆಯು ಜಿಲ್ಲೆಯ ಒಟ್ಟು ಎರಡು ಪರೀಕ್ಷಾ ಕೇಂದ್ರಗಳಲ್ಲಿ ಫೆಬ್ರವರಿ 15 ರಂದು ನಡೆಯಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು, ನಡೆಯಬಹುದಾದದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ನಿಗಧಿಪಡಿಸಿದ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ 2023 ರ ಕಲಂ 163 ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಆದೇಶಿಸಿರುತ್ತಾರೆ.
ಈ ಸಂದರ್ಭದಲ್ಲಿ ಪರೀಕ್ಷಾ ಕೇಂದ್ರಗಳ 200 ಮೀ. ಸುತ್ತ ಸೈಬರ್ ಮತ್ತು ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆ, ಯಾವುದೇ ಸಾರ್ವಜನಿಕರು 5 ಜನ ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ನಿಷೇಧಿತ ಪ್ರದೇಶವೆಂದು ಜಾರಿಗೊಳಿಸಿದ ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ಗುಂಪು ಸೇರುವುದು ಅಥವಾ ತಿರುಗುವುದನ್ನು, ಅನುಮಾನಾಸ್ಪದ ವ್ಯಕ್ತಿಗಳು ಪರೀಕ್ಷಾ ಕೇಂದ್ರವನ್ನು ಪ್ರವೇಶಿಸುವುದನ್ನು, ಪರೀಕ್ಷಾ ಕೇಂದ್ರಗಳ 200 ಮೀ. ಸುತ್ತ ಮೊಬೈಲ್ ಬಳಕೆಯನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.












