ಉತ್ತರಪ್ರದೇಶದಲ್ಲಿ ಬಿಜೆಪಿ – ಸಮಾಜವಾದಿ ಪಕ್ಷದ ನಡುವೆ ಹಾವು-ಏಣಿ ಆಟ , 10 ಸ್ಥಾನಗಳಲ್ಲಿ ಬಿಜೆಪಿ ಮುನ್ನಡೆ.

ದೇಶದಲ್ಲಿಯೇ ಅತಿ ಹೆಚ್ಚು ಲೋಕಸಭೆ ಕ್ಷೇತ್ರಗಳನ್ನು ಹೊಂದಿರುವ ಉತ್ತರಪ್ರದೇಶದಲ್ಲಿ ಬಿಜೆಪಿ ಹಾಗೂ ಸಮಾಜವಾದಿ ಪಕ್ಷದ ನಡುವೆ ಹಾವು-ಏಣಿ ಆಟ ಮುಂದುವರೆದಿದೆ.
ಪ್ರಸ್ತುತ ಲಭ್ಯವಿರುವ ಮಾಹಿತಿಗಳ ಪ್ರಕಾರ ಉತ್ತರ ಪ್ರದೇಶದಲ್ಲಿ 38 ಸ್ಥಾನಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದರೆ, ಸಮಾಜವಾದಿ ಪಕ್ಷ 28 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಐಎನ್’ಸಿ 7 ಕ್ಷೇತ್ರಗಳಲ್ಲಿ, ರಾಷ್ಟ್ರೀಯ ಲೋಕ ದಳ ಪಕ್ಷ 2 ಸ್ಥಾನಗಳಲ್ಲಿ ಹಾಗೂ ಇತರೆ ಪಕ್ಷಗಳು 2 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿವೆ.
ಲೋಕಸಭೆ ಚುನಾವಣೆಯ ಫಲಿತಾಂಶದಲ್ಲಿ ಉತ್ತರಪ್ರದೇಶ ರಾಜ್ಯದ ಪಾತ್ರ ಬಹಳ ನಿರ್ಣಾಯಕವಾಗಿದ್ದು, ಒಟ್ಟು 80 ಸೀಟುಗಳನ್ನು ಹೊಂದಿರುವ ಉತ್ತರ ಪ್ರದೇಶದಲ್ಲಿ ಹೆಚ್ಚಿನ ಸೀಟುಗಳನ್ನು ಪಡೆದವರಿಗೇ ಕೇಂದ್ರದಲ್ಲಿ ಅಧಿಕಾರ ಖಚಿತ ಎಂಬ ಅಭಿಪ್ರಾಯವಿದೆ.

ವಾರಣಾಸಿಯಲ್ಲಿ ಪ್ರಧಾನಿ ಮೋದಿ, ಕನೌಜ್‌ನಲ್ಲಿ ಅಖಿಲೇಶ್ ಯಾದವ್, ರಾಯ್ ಬರೇಲಿಯಲ್ಲಿ ರಾಹುಲ್ ಗಾಂಧಿ ಮುನ್ನಡೆ ಸಾಧಿಸಿದ್ದಾರೆ.
ಉತ್ತರಪ್ರದೇಶದಲ್ಲಿ ವಾರಣಾಸಿ, ರಾಯ್ ಬರೇಲಿ, ಅಮೇಥಿ, ಕನ್ನೌಜ್, ಮೈನ್‌ಪುರಿ, ಅಜಮ್‌ಗಢ, ಘಾಜಿಯಾಬಾದ್, ಮೀರತ್, ಫೈಜಾಬಾದ್, ಮಥುರಾ, ಗೌತಮ್ ಬುದ್ಧ ನಗರ, ಕಾನ್ಪುರ, ಗೋರಖ್‌ಪುರ ಗಮನ ಸೆಳೆದಿರುವ ಪ್ರಮುಖ ಕ್ಷೇತ್ರಗಳಾಗಿವೆ.