ಎಕ್ಸ್‍ಪರ್ಟ್ ಪದವಿ ಪೂರ್ವ ಕಾಲೇಜಿನಲ್ಲಿ “ಎಜುಪಾತ್” ಕಾರ್ಯಕ್ರಮವನ್ನು ಉದ್ಘಾಟನೆ

ಮಂಗಳೂರು: ವಿದ್ಯಾರ್ಥಿಗಳು ತಾವು ಯಾವುದೇ ಕ್ಷೇತ್ರದಲ್ಲಿ ಮುಂದುವರೆದರೂ ಕೂಡ ಕಠಿಣ ಪರಿಶ್ರಮ ಮತ್ತು ವಿನಮ್ರತೆಯನ್ನು ರೂಢಿಸಿಕೊಳ್ಳಬೇಕು. ಸತತ ಪ್ರಯತ್ನ ಹಾಗೂ ಸರಿಯಾದ ಯೋಜನೆಗಳು ನಮ್ಮನ್ನು ಉನ್ನತಿಯತ್ತ ಕೊಂಡೊಯ್ಯುತ್ತದೆ ಎಂದು ಯುಪಿಎಸ್‍ಸಿ ಪರೀಕ್ಷೆಯಲ್ಲಿ 2ನೇ ರಾಂಕ್ ಪಡೆದ ಎಕ್ಸ್‍ಪರ್ಟ್ ಕಾಲೇಜಿನ ಹಳೆ ವಿದ್ಯಾರ್ಥಿಯಾದ ಶ್ರೀ ವರದರಾಜ್ ಗಾಂವ್ಕರ್ ಅವರು ಹೇಳಿದರು.

ಎಕ್ಸ್‍ಪರ್ಟ್ ಪದವಿ ಪೂರ್ವ ಕಾಲೇಜು, ಮಂಗಳೂರು ಹಮ್ಮಿಕೊಂಡ “ಎಜುಪಾತ್” ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಾ ಅಖಿಲ ಭಾರತ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ವಿವಿಧ ಮಾರ್ಗಗಳು ಮತ್ತು ತಂತ್ರಗಳ ಕುರಿತು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಕಾರ್ಯಕ್ರಮದ ಕೊನೆಯಲ್ಲಿ ವಿದ್ಯಾರ್ಥಿಗಳು ಸಂಪನ್ಮೂಲ ವ್ಯಕ್ತಿಗಳೊಂದಿಗೆ ಸಂವಾದ ನಡೆಸಿದರು. ಪ್ರಾಂಶುಪಾಲರಾದ ಪ್ರೈ. ರಾಮಚಂದ್ರ ಭಟ್ ಸಂಪನ್ಮೂಲ ವ್ಯಕ್ತಿಗಳಿಗೆ ಸ್ಮರಣಿಕೆ ನೀಡಿ ಗೌರವಿಸಿದರು.

ಈ ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು.

ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವುದು ನಿಜಕ್ಕೂ ಒಂದು ಸವಾಲು. ಆದರೆ ಸರಿಯಾದ ತಂತ್ರ ಮತ್ತು ಕಠಿಣ ಪರಿಶ್ರಮ ಇದ್ದರೆ ಖಂಡಿತ ಅವುಗಳನ್ನು ಸರಳವಾಗಿ ಎದುರಿಸಬಹುದು ಎಂದು ವಿದ್ಯಾರ್ಥಿಗಳಿಗೆ ಕರೆನೀಡಿದರು.