ಬೆಂಗಳೂರು: ಕರ್ನಾಟಕದ ವಿವಿಧ ಭಾಗಗಳಲ್ಲಿ ಏಪ್ರಿಲ್ 13ರವರೆಗೆ ಭಾರಿ ಮಳೆಯಿರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಚಂಡಮಾರುತ ಪರಿಚಲನೆಯು ತಮಿಳುನಾಡು ಹಾಗೂ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ತರಿಸಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಕೊಪ್ಪಳ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.












