ಐ.ಟಿ.ಐ ಪ್ರವೇಶಾತಿ: ಅರ್ಜಿ ಆಹ್ವಾನ

ಉಡುಪಿ: ನಗರದ ಮಣಿಪಾಲ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ (ಐ.ಟಿ.ಐ) ವಿವಿಧ ತಾಂತ್ರಿಕ ವೃತ್ತಿಗಳ ಕೋರ್ಸುಗಳ ಪ್ರವೇಶಾತಿಗಾಗಿ ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ಹಾಗೂ ಪಿ.ಯು.ಸಿ ಅನುತ್ತೀರ್ಣ ವಿದ್ಯಾರ್ಥಿಗಳಿಂದ ಇಲಾಖೆಯ
ವೆಬ್‌ಸೈಟ್ www.cite.karnataka.gov.in ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 3 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಪ್ರಾಚಾರ್ಯರು, ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಪ್ರಗತಿನಗರ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2986145, ಮೊ.ನಂ: 9964247101, 9902001790, 9535270498 ಹಾಗೂ 9738439619 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.